ಶ್ರೀನಗರ: ದೇಶದ ಗಡಿ ಕಾಯುವ ಯೋಧರೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಕಾರ್ಗಿಲ್ ತಲುಪಿದ್ದಾರೆ. ಕಳೆದ ಎಂಟು ವರ್ಷಗಳಿಂದ ಗಡಿಯಲ್ಲಿ ನಿಯೋಜನೆಗೊಂಡಿರುವ ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಿಸುತ್ತಿದ್ದಾರೆ.
ಸಿಕ್ಕಿರುವ ಮಾಹಿತಿ ಪ್ರಕಾರ ಸೈನಿಕರನ್ನು ಭೇಟಿ ಮಾಡಿ ಅವರೊಂದಿಗೆ ಚಹಾ ಸೇವಿಸಿ ದೀಪಾವಳಿ ಆಚರಿಸಲಿದ್ದಾರೆ. ಇದಕ್ಕೂ ಮುನ್ನವೇ ದೀಪಾವಳಿ ಸಂದರ್ಭದಲ್ಲಿ ಗಡಿಯ ವಿವಿಧೆಡೆ ಸೈನಿಕರೊಂದಿಗೆ ಪ್ರಧಾನಿ ದೀಪಾವಳಿ ಆಚರಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಸೈನಿಕರೊಂದಿಗೆ ಪ್ರಧಾನಿ ದೀಪಾವಳಿಯನ್ನು ಆಚರಿಸಿದ್ದರು.
0 Comments