ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮೈಸೂರಿಗೆ ವರ್ಗಾವಣೆ

ಜಾಹೀರಾತು/Advertisment
ಜಾಹೀರಾತು/Advertisment

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ಮೈಸೂರಿನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಡಾ. ಕೆ.ವಿ.ರಾಜೇಂದ್ರ ಅವರಿಂದ ತೆರವಾದ ಸ್ಥಾನಕ್ಕೆ ದ.ಕ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಕೋವಿಡ್ ಸಂಕಷ್ಟದ ವೇಳೆ ಹಾಗೂ ಅತಿವೃಷ್ಟಿಯಿಂದ ಉಂಟಾದ ಹಾನಿಯಾದ ಸಂದರ್ಭ ದ.ಕ.ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಡಾ.ಕೆ.ವಿ.ರಾಜೇಂದ್ರ ಕಾರ್ಯನಿರ್ವಹಿಸಿದ್ದರು. ಡಾ. ಕುಮಾರ್ ಅವರು ಕಳೆದ ವರ್ಷವಷ್ಟೇ ಕೆಎಎಸ್‌ನಿಂದ ಐಎಎಸ್‌ಗೆ ಪದೋನ್ನತಿಯಾಗಿದ್ದರು. ಈ ಹಿಂದೆ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದರು.

Post a Comment

0 Comments