ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಡುಬಿದಿರೆ ಮಂಡಲ ಇದರ ವತಿಯಿಂದ ಒಂಟಿಕಟ್ಟೆಯ ಕಡಲಕೆರೆಯಲ್ಲಿರುವ ಕೋಟಿ-ಚೆನ್ನಯ ಗುತ್ತಿಗೆ ಮನೆಯ ಶೈಲಿಯ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು.
ಕಡಲಕೆರೆ ಶಾಲೆಯ ವಿದ್ಯಾರ್ಥಿಗಳು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಕನ್ನಡದ 5 ಹಾಡುಗಳನ್ನು ಹಾಡಿದರು.
ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್ , ಜಿಲ್ಲಾ ಜಿಲ್ಲಾ ಕಾರ್ಯದರ್ಶಿ ಕಸ್ತೂರಿ ಪಂಜ, ಬಿಜೆಪಿ ಮಂಡಲದ ಅಧ್ಯಕ್ಷ ಸುನೀಲ್ ಆಳ್ವ, ಪುರಸಭಾ ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರಾದ ಸ್ವಾತಿ ಪ್ರಭು, ಸೌಮ್ಯ ಶೆಟ್ಟಿ, ದಿವ್ಯಾ ಜಗದೀಶ್, ಧನಲಕ್ಷ್ಮೀ,ಎಪಿಎಂಸಿ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್, ಬಿಜೆಪಿ ಮೂಡುಬಿದಿರೆ ಮಂಡಲ ಯುವ ಮೋರ್ಚಾದ ಅಧ್ಯಕ್ಷ ಅಶ್ವಥ್ ಪಣಪಿಲ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರಾ, ಪುತ್ತಿಗೆ ಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
0 Comments