ಶಿರ್ತಾಡಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ.) ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಗುರುಜಯಂತಿ ಮತ್ತು ಶಿರ್ತಾಡಿಯಲ್ಲಿ 25ನೇ ವರ್ಷದ ಗುರುಪೂಜೆಯು ಅ. 23ರಂದು ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ಅಶೋಕ್ ಮಾಂಟ್ರಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿ ಸರಕಾರದ ಗಮನಕ್ಕೆ ತಂದು ಸಂಘದ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆಯಿತ್ತರು. ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, , ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ., ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ,.ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಗೌರವಾಧ್ಯಕ್ಷ ಲಕ್ಷ್ಮಣ ವಿ. ಕೋಟ್ಯಾನ್, ಶಿರ್ತಾಡಿ ಗ್ರಾಮ ಪಂಚಾಯತು ಅಧ್ಯಕ್ಷ ಸಂತೋಷ್ ಕೋಟ್ಯಾನ್, ವಾಲ್ಪಾಡಿ ಗ್ರಾಮ ಪಂಚಾಯತು ಅಧ್ಯಕ್ಷ ಪ್ರದೀಪ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರೇಖಾ ಸಾಲ್ಯಾನ್ ಉಪಸ್ಥಿತರಿದ್ದರು. ಪೂರ್ವಾಹ್ನ ಶಿರ್ತಾಡಿ ಬಸ್ ನಿಲ್ದಾಣ ದಿಂದ ಸಂಘದ ಕಾರ್ಯಾಲಯದವರೆಗೆ ಬೃಹತ್ ಶೋಭಾಯಾತ್ರೆ ನಡೆಯಿತು. ಉದ್ಯಮಿ ಭಾಸ್ಕರ್ ಎಸ್ ಕೋಟ್ಯಾನ್, ಬೆಳಗಾಮ್ ನಿಪ್ಪಾಣಿಯ ಅರುಣಾನಂದ ಸ್ವಾಮೀಜಿ ಶೋಭಯಾತ್ರೆಗೆ ಚಾಲನೆ ನೀಡಿದರು. ಶ್ರೀಕ್ಷೇತ್ರ ಕಂದಿರು ಆಡಳಿತ ಮೊಕ್ತೇಸರರು ಸೋಮನಾಥ ಶಾಂತಿ ಪೌರೋಹಿತ್ಯ ದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಪೂಜೆ ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಧ್ಯಕ್ಷ ಗೋಪಿನಾಥ್ ಎಸ್., ಸಂಘದ ಏಳಿಗೆಗೆ ಶ್ರಮಿಸಿದವರನ್ನು ಮತ್ತು ದಾನಿಗಳನ್ನು ಪ್ರತಿಭಾನ್ವಿತರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಸಕ್ತ ಎರಡು ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಲಾಯಿತು. ಸಂಘದ ಮಾಜಿ ಅಧ್ಯಕ್ಷ ರುಕ್ಕಯ್ಯ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ಕುಶಾಲ್ ಕುಮಾರ್ ವರದಿ ಮಂಡಿಸಿದರು. ಸಂಪತ್ ಬಂಗೇರ ಧನ್ಯವಾದವಿತ್ತರು. ಗಣೇಶ್ ಪಿ ಅಳಿಯೂರು ನಿರೂಪಿಸಿದರು. ಮಧ್ಯಾಹ್ನ ನಂತರ ಕಲ್ಲಡ್ಕ ವಿಠ್ಠಲ ನಾಯಕ್ ಬಳಗದವರಿಂದ ಗೀತ ಸಾಹಿತ್ಯ ಸಂಭ್ರಮ ಜರುಗಿತು.
0 Comments