ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನೆಯಿಂದ ಮೂಡಿಬಂದ ತುಳುನಾಡಿನ ದೈವಾರಾಧನೆ, ಕಂಬಳ ಸಹಿತ ಕರಾವಳಿ ಸಂಸ್ಕೃತಿಯನ್ನು ಬಿಂಬಿಸುವ ಕಾಂತಾರ ಸಿನಿಮಾವನ್ನು ಕುಂದಾಪುರ ಭಾಗದ ದೈವ ನರ್ತಕರು, ದರ್ಶನ ಪಾತ್ರಿಗಳ ಸಹಿತ, ದೈವದ ಸೇವೆ ಮಾಡುವ ಸಮಾಜ ಮತ್ತು ವ್ಯಕ್ತಿಗಳೊಂದಿಗೆ ಸಿನಿಮಾ ವೀಕ್ಷಿಸುವ ಮಾಹಿತಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದರು.
ಸಚಿವರ ಟ್ವೀಟ್‌ನ್ನು ರೀಟ್ವೀಟ್ ಮಾಡಿ ಪ್ರತಿಕ್ರಿಯಿಸಿದ ನಟ ರಿಷಭ್ ಶೆಟ್ಟಿ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕುಂದಾಪುರದ ಕೋಟೇಶ್ವರ ಭಾರತ್ ಸಿನಿಮಾ ಮಂದಿರದಲ್ಲಿ ನೂರ ಇಪ್ಪತ್ತು ಟಿಕೆಟನ್ನು ಸಚಿವರ ಹೆಸರಿನಲ್ಲಿ ಕಾಯ್ದಿರಿಸಲಾಗಿದ್ದು, ಖುದ್ದು ಸಚಿವರೇ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ.
ಕುಂದಾಪುರದ ಕೋಟೇಶ್ವರ ಭಾರತ್ ಸಿನಿಮಾ ಮಂದಿರದಲ್ಲಿ ನೂರ ಇಪ್ಪತ್ತು ಟಿಕೆಟನ್ನು ಸಚಿವರ ಹೆಸರಿನಲ್ಲಿ ಕಾಯ್ದಿರಿಸಲಾಗಿದ್ದು, ಖುದ್ದು ಸಚಿವರೇ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ.
0 Comments