ವರ್ಕೌಟ್ ಆಯಿತು ನಳಿನ್ ಪ್ಲಾನ್.! ಖರ್ಗೆ ತವರಿನಲ್ಲಿ ಬಿಜೆಪಿ ಅಬ್ಬರ.!

ಜಾಹೀರಾತು/Advertisment
ಜಾಹೀರಾತು/Advertisment


 ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕವು ರಾಜ್ಯದಲ್ಲೆಡೆ ಮಿಂಚಿನ ಸಂಚಾರ ನಡೆಯುತ್ತಿದೆ. ಕಲಬುರ್ಗಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶವು ಅದ್ಭುತ ಯಶಸ್ಸನ್ನು ಕಂಡಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಹಿತ ವಿವಿಧ ಬಿಜೆಪಿ ಮುಖಂಡರು ಮತ್ತು ಸಚಿವರ ಉಪಸ್ಥಿತಿಯಲ್ಲಿ ನಡೆದ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶವು ಲಕ್ಷ ಲಕ್ಷ ಸಂಖ್ಯೆಯ ಜನರಿಂದ ಕೂಡಿತ್ತು.


ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಮತ್ತೊಂದು ವಿಶೇಷ. ನಳಿನ್ ಕುಮಾರ್ ಕಟೀಲ್ ರವರು ಈ ಮೊದಲ ಸಮಾವೇಶವನ್ನೇ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಲ್ಲಿ ಆಯೋಜಿಸಿದ್ದು ಬಿಜೆಪಿ ಹೈಕಮಾಂಡ್‌ಗೆ ಉತ್ತಮ ಸಂದೇಶ ರವಾನಿಸಿದ್ದಾರೆ. ನಳಿನ್ ಕುಮಾರ್ ತಂಡ ಕಲಬುರ್ಗಿಗೆ ಲಗ್ಗೆ ಇಟ್ಟಿದ್ದು ಎಸಿಸಿ ಅಧ್ಯಕ್ಷರ ತವರಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನವನ್ನು ಕಂಡಿದೆ.



Post a Comment

0 Comments