ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿ ಶ್ರೀಮತಿ ನೂತನ ಅವರು ಇಂದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.
ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮುಂದಾಳತ್ವದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ, ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.
0 Comments