ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ರವರು ಇಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥನ ದರ್ಶನವನ್ನು ಪಡೆದ ಗೋವಾ ಮುಖ್ಯಮಂತ್ರಿಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಸ್ವಾಗತಿಸಿದರು.
ನಂತರ ಇಬ್ಬರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕುಶಲೋಪರಿ ಮಾತುಕತೆ ನಡೆಸಿದರು.
ನಂತರ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಇದರ 26,27 ಮತ್ತು 28ನೇಯ ಬ್ಯಾಚ್ ಗಳ ಪದವಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗೋವಾ ಮುಖ್ಯಮಂತ್ರಿಗಳು ಸಂಜೆ ಉಡುಪಿಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
0 Comments