ಹೊಳಪು - 2022 ಪಂಚಾಯತ್ ರಾಜ್ ಕ್ರೀಡಾಕೂಟ ಯಶಸ್ವಿಯಾಗಲಿ:ಪೇಜಾವರ ಶ್ರೀ ಶುಭ ಹಾರೈಕೆ.


ಹೊಳಪು - 2022 ಪಂಚಾಯತ್ ರಾಜ್ ಕ್ರೀಡಾ ಕೂಟ ಅತ್ಯಂತ ಯಶಸ್ವಿಯಾಗಲಿ. ಜನಸಾಮಾನ್ಯರ ನಡುವೆ ಜನರ ನೋವು ನಲಿವುಗಳನ್ನು ಅರಿತು ಸೇವಾ ಮನೋಬಾವಾದಿಂದ ಕೆಲಸ ಮಾಡುವ ಪಂಚಾಯತ್ ಹಾಗೂ ನಗರ ಸ್ಥಳೀಯಾಡಳಿತ ಪ್ರತಿನಿಧಿಗಳು ಪಕ್ಷಭೇದ ಮರೆತು ಒಟ್ಟಾಗಿ ಒಂದಾಗಿ ಹೊಳಪು - 2022 ಕ್ರೀಡೋತ್ಸವದಲ್ಲಿ ಭಾಗವಹಿಸುವ ಮೂಲಕ ಅವಳಿ ಜಿಲ್ಲೆಗಳ ಒಗ್ಗಟ್ಟು ಪ್ರದರ್ಶನ ಆಗಲಿ ಎಂದು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹೊಳಪು ಕ್ರೀಡಾಕೂಟದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶ್ರೀ ಆನಂದ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಉಪಾಧ್ಯಕ್ಷ ಶ್ರೀ ವಾಸು ಪೂಜಾರಿ, ಪಂಚಾಯತ್ ಸದಸ್ಯರುಗಳು, ಕಾರಂತ ಪ್ರತಿಷ್ಠಾನದ ಶ್ರೀ ಪ್ರಮೋದ್ ಹಂದೆ, ಶ್ರೀ ಸುಬ್ರಾಯ ಆಚಾರ್ ಉಪಸ್ಥಿತರಿದ್ದರು. ಸಚಿವರ ಆಪ್ತ ಸಹಾಯಕ ಶ್ರೀ ಹರೀಶ್ ಶೆಟ್ಟಿ ಸ್ವಾಗತಿಸಿ ವಂದಿಸಿದರು. 

Post a Comment

0 Comments

Advertisement