ದ.ಕ ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ, ಕಿಂಞಣ್ಣರೈ ಸ್ಮಾರಕಕ್ಕೆ 50 ಲಕ್ಷ ರೂ. ಅನುದಾನ ಎಂದ ಸಚಿವ ಸುನಿಲ್

ಜಾಹೀರಾತು/Advertisment
ಜಾಹೀರಾತು/Advertisment

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು.

ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ 

ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಮಾತನಾಡಿ, ಗಡಿನಾಡ ಕವಿ ಎಂದೇ ಖ್ಯಾತಿ ಹೊಂದಿರುವ ಕಯ್ಯಾರ ಕಿಞ್ಞಣ್ಣ ರೈ ಅವರ ಸ್ಮಾರಕಕ್ಕೆ ಗಡಿ ಪ್ರದೇಶಾಭಿವೃದ್ಧಿ ಯೋಜನೆಯಡಿ 50 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದರು.

ದ.ಕ ಜಿಲ್ಲೆಗೆ ಕಳೆದ 5 ವರ್ಷಗಳಲ್ಲಿ 21 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ ಹಾಗೂ ಕಳೆದ ಸಾಲಿನಲ್ಲಿ 23 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದೆ ಈ ಮೂಲಕ ಗಡಿ ಪ್ರದೇಶಾಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಯು.ಟಿ.ಖಾದರ್, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್ ಮೇಯರ್ ಜಯಾನಂದ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಲ್ಪಿ, ವೆಂಕಟೇಶ್ ಬಂಟ್ವಾಳ್ ಹಾಗೂ ಶಶಿಧರ ಪೊಯ್ಯತ್ತಬೈಲ್ ಸಹಿತ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನದ ಬಳಿಕ ನೆಹರೂ ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನಡೆಯಿತು.


Post a Comment

0 Comments