ನ.7ರಂದು ಮೂಡುಬಿದಿರೆಯಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆ

ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ: 'ಶ್ರೀ ರಾಮದಾಸ, ಆಶ್ರಮದ ನೇತೃತ್ವದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಸಾಧು-ಸಂತರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀರಾಮ ದಿಗ್ವಿಜಯ ರಥಯಾತ್ರೆಯು ನ.6ರಂದು ಕೊಲ್ಲೂರು ಮೂಲಕ ಕರ್ನಾಟಕವನ್ನು ಪ್ರವೇಶಸಿ, 7ರಂದು ಮಧ್ಯಾಹ್ನ 3.35ಕ್ಕೆ ಮೂಡುಬಿದಿರೆ ಪುರಪ್ರವೇಶಗೈಯಲಿರುವುದು. ಈ ನಿಟ್ಟಿನಲ್ಲಿ ಸಾವಿರ ಕಂಬದ ಬಸದಿಯಿಂದ ಕನ್ನಡಭವನದವರೆಗೆ ಶೋಭಾಯಾತ್ರೆ ನಡೆಯಲಿದೆ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಾಯಂಕಾಲ 5ಗಂಟೆಗೆ ಕನ್ನಡ ಭವನದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಮೂಡುಬಿದಿರೆಯ ಭಟ್ಟಾರಕ ಸ್ವಾಮೀಜಿ, ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಶ್ರೀ ವಿದ್ಯಾ ನಂದ ಸ್ವಾಮೀಜಿ, ಶ್ರೀಕ್ಷೇತ್ರ ಕೇಮಾರು ಸಾಂದಿಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಶ್ರೀಕ್ಷೇತ್ರ ಕರಿಂಜೆಯ ಶ್ರೀ. ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಓಂ ಶ್ರೀ ಮಠದ ಶ್ರೀ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ, ಶಾಸಕ ಉಮಾ ನಾಥ ಕೋಟ್ಯಾನ್, ವಿಶ್ವ ಹಿಂದೂ ಪರಿಷತ್ ಮೂಡುಬಿದಿರೆ ಅಧ್ಯಕ್ಷ ವಿಶ್ವನಾಥ ಪ್ರಭು ಉಪಸ್ಥಿತರಿರುವರು ಎಂದು ಸ್ವಾಮೀಜಿ ಮಾಹಿತಿ ನೀಡಿದರು. 

ಶ್ರೀರಾಮ ದಿಗ್ವಿಜಯ ರಥಯಾತ್ರಾ ಮೂಡುಬಿದಿರೆ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಾಂತಾರಾಮ ಕುಡ್ವ, ಕೋಶಾಧಿಕಾರಿ ಶ್ಯಾಮ್‌ ಹೆಗ್ಡೆ, ಸಂಚಾಲಕ ಬಾಹುಬಲಿ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Post a Comment

0 Comments