ನಾನು ಹೋಗಲ್ಲ ಕಣ್ರೀ. ! ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರು.!

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 


ಬೆಂಗಳೂರಿನ ವಿಧಾನ ಸೌಧದ  ಮೆಟ್ಟಿಲುಗಳಲ್ಲಿ ನಡೆದ ದಿ.ಪುನೀತ್ ರಾಜ್ ಕುಮಾರ್  ಅವರಿಗೆ ಕೊಡಲ್ಪಡುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗೈರಾಗಿದ್ದಾರೆ. 

ಈ ಬಗ್ಗೆ ಮಧ್ಯಮಗಳು ಸಿದ್ದರಾಮಯ್ಯರನ್ನು ಪ್ರಶ್ನಿಸಿದಾಗ ನನ್ನ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಿದ್ದಾರೆ ಮತ್ತು ಆ ಆಮಂತ್ರಣ ಪತ್ರಿಕೆ ತಲುಪಿದೆ ಆದರೆ ಯಾರು ಕೂಡ ನನ್ನನ್ನು ಕರೆ ಮಾಡಿ ಆಹ್ವಾನಿಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲದೆ ಸರ್ಕಾರ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುತ್ತಿರುವುದು ಸ್ವಾಗತಾರ್ಹ,  ಆದರೆ ನಾನು ಈ ಕಾರ್ಯಕ್ರಮ ಕ್ಕೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

Post a Comment

0 Comments

Advertisement