ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಮನೆ ನಿರ್ಮಾಣದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಅವರು ನೀಡಿದ್ದ ಭರವಸೆಯನ್ನು ಈಡೇರಿಸುತ್ತಿದ್ದು ಅವರಿಗೆ ಬಿರುವೆರ್ ಸಂಘಟನೆಯ ವತಿಯಿಂದ ಅಭಿನಂದನೆಗಳನ್ನು ಅರ್ಪಿಸುತ್ತಿದ್ದೇವೆ ಎಂದು ಖ್ಯಾತ ನಿರೂಪಕ ಹಾಗೂ ಬಿರುವೆರ್ ಕುಡ್ಲ ಪ್ರಮುಖ ದಿನೇಶ್ ರಾಯಿ ರವರು ಹೇಳಿದರು.
ಪ್ರವೀಣ್ ನೆಟ್ಟಾರ್ ಹತ್ಯೆಯ ಸಂದರ್ಭದಲ್ಲಿ ನಾವು ಸರ್ಕಾರ ಹಾಗೂ ಪಕ್ಷಕ್ಕೆ ವಿವಿಧ ಮನವಿಯನ್ನು ಸಲ್ಲಿಸಿದ್ದೆವು.ಪ್ರವೀಣ್ ಹತ್ಯೆಯ ಪ್ರಕರಣವನ್ನು ಎನ್.ಐ.ಎ.ಗೆ ವಹಿಸುವುದು, ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಾಣ ಹಾಗೂ ಸರ್ಕಾರಿ ಉದ್ಯೋಗ ನೀಡುವುದು ಸಹಿತ ಎಲ್ಲಾ ಮನವಿಯನ್ನು ಸಂಸದರು ಸ್ವತಃ ಮುತುವರ್ಜಿ ವಹಿಸಿ ನೆರವೇರಿಸಿದ್ದಾರೆ. ಈ ಕಾರಣಕ್ಕಾಗಿ ಸರ್ಕಾರ ಹಾಗೂ ಸಂಸದರಿಗೆ ವಿಶೇಷ ಅಭಿನಂದನೆಗಳು ಎಂದು ಅವರು ಹೇಳಿದರು.
ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹಾಗೂ ಸಂಘಟನೆಯ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳ್ಳಾರೆಯಲ್ಲಿ ಮತಾಂಧ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರ್ ರವರ ಕುಟುಂಬಕ್ಕೆ ಮನೆ ನಿರ್ಮಾಣದ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿದ್ದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಭೂಮಿ ಪೂಜೆ ನೆರವೇರಿಸಿದರು. ಈ ಹಿಂದೆ ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ರಾಜ್ಯಾಧ್ಯಕ್ಷರು ಭರವಸೆ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ಭೂಮಿ ಪೂಜೆ ನೆರವೇರಿಸಿದರು.
0 Comments