ಶಾಸಕರ ಅಭಿವೃದ್ಧಿಯ ನಡೆ‌,ಪಂಚಾಯತಿ ಸದಸ್ಯರ ಸಹಕಾರ ನನಗೆ ಸ್ಪೂರ್ತಿ:ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತ

ಜಾಹೀರಾತು/Advertisment
ಜಾಹೀರಾತು/Advertisment

 

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಕಾಂಗ್ರೆಸ್ ಯುವ‌ನಾಯಕ ಮಿಥುನ್ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಪಣಪಿಲ ಗ್ರಾಮದ ಸದಾನಂದ ಪೂಜಾರಿಯವರು ಇಂದು ಅಧಿಕೃತವಾಗಿ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ರವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.

ಶಿರ್ತಾಡಿಯ ಶ್ರೀ ಬ್ರಹ್ಮ ರೆಸಿಡೆನ್ಸಿಯಲ್ಲಿ ನಡೆದ ಬಿಜೆಪಿ ಶಿರ್ತಾಡಿ ಮಹಾಶಕ್ತಿಕೇಂದ್ರದ ಸಭೆಯಲ್ಲಿ ಗ್ರಾಮದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು ಶಾಸಕ ಉಮನಾಥ್ ಕೋಟ್ಯಾನ್ ರವರು ಬಿಜೆಪಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.


ನಂತರ ಮಾತನಾಡಿದ ಸದಾನಂದ ಪೂಜಾರಿಯವರು "ನಾನು ಕೆಲ ಸಮಯದ ಹಿಂದೆಯೇ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವಿದ್ದೆ. ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ರವರು ಕ್ಷೇತ್ರದ ಅಭಿವೃದ್ಧಿಗೆ ದುಡಿಯುತ್ತಿದ್ದಾರೆ. ನಮ್ಮ ಪಣಪಿಲ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕರು ಮತ್ತು ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರ ಜನಪರ ಕಾಳಜಿಯನ್ನು ಒಪ್ಪಿಕೊಂಡು ಪಕ್ಷದ ಸಿದ್ದಾಂತಕ್ಕೆ ಬದ್ಧನಾಗಿ ಬಿಜೆಪಿ ಸೇರುತ್ತಿದ್ದೇನೆ" ಎಂದು ಹೇಳಿದರು.

ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಶೆಟ್ಟಿಗಾರ್,ಕೇಶವ ಕರ್ಕೇರ, ಶಿರ್ತಾಡಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವ್ಯವರ್ಮ ಬಳ್ಳಾಳ್, ಮಂಡಲ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸುಧಾಕರ ಡಿ.ಪೂಜಾರಿ, ಸೋಮನಾಥ ಕೋಟ್ಯಾನ್, ಲತಾ ಹೆಗ್ಡೆ, ಪಣಪಿಲ ಶಕ್ತಿ ಕೇಂದ್ರದ ಅಧ್ಯಕ್ಷ ಮುನಿರಾಜ್ ಹೆಗ್ಡೆ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ತುಳಸಿ ಮೂಲ್ಯ, ಉಪಾಧ್ಯಕ್ಷ ಅಶೋಕ್ ಶೆಟ್ಟಿ, ಸಂತೋಷ್ ಪೂಜಾರಿ, ಪ್ರಸಾದ್, ಜನಿತಾ ಪಣಪಿಲ, ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷ ಅಶ್ವಥ್ ಪಣಪಿಲ, ಪಣಪಿಲ ಬಿಜೆಪಿ ಸ್ಥಾನೀಯ ಸಮಿತಿಯ ಅಧ್ಯಕ್ಷ ದೀಕ್ಷಿತ್ ಪಣಪಿಲ, ಕಾರ್ಯದರ್ಶಿ ಸಚಿನ್ ಪಣಪಿಲ ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.

Post a Comment

0 Comments