ಮೂಡುಬಿದಿರೆ : ಬುಧವಾರದಂದು ಶಾಲಾ ವಾಹನಕ್ಕೆ ಢಿಕ್ಕಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರಿನ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯ ರಾತ್ರಿ ವೇಳೆಗೆ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಕಾರಿನ ಚಾಲಕ ಕಾರ್ಕಳದ ನಿವಾಸಿ ರಾಜೇಶ್ ಆಚಾರ್ಯ (39ವ) ಎಂದು ಗುರುತಿಸಲಾಗಿದೆ. ಮೂಡುಬಿದಿರೆಯ ಆಲಂಗಾರಿನ ಬಸವನಕಜೆ ಬಳಿ ಬುಧವಾರ ಮೂಡುಬಿದಿರೆ ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕೆಎ09 z 7481 ನಂಬರಿನ ಕಾರು ಆಲಂಗಾರು ಬಳಿ ಬ್ರೇಕ್ ಹಾಕಿದ್ದು ಆಗ ತಕ್ಷಣ ಕಾರು ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ ಆಗ ಶಾಲಾ ವಾಹನದ ಚಾಲಕ ಎಡ ಕಡೆಗೆ ವಾಹನವನ್ನು ತಿರುಗಿಸಿದ್ದು ಆಗ ಅಲ್ಲಿಯೇ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ನಿಂತಾಗ ಕಾರು ಅಲ್ಲಿಗೆ ಬಂದು ಗುದ್ದಿತ್ತು. ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆನ್ನಲಾಗಿದೆ.
ಶಾಲಾ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು.
ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆನ್ನಲಾಗಿದೆ.
0 Comments