ಮೂಡುಬಿದಿರೆ : ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ : ದ.ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಮಿಜಾರು ಇವುಗಳ ಸಹಯೋಗದಲ್ಲಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವು ಸ್ವರಾಜ್ಯ ಮೈದಾನದಲ್ಲಿ ಬುಧವಾರ ನಡೆಯಿತು.

ಪುರಸಭಾ ಅಧ್ಯಕ್ಷ ಪ್ರಸಾದ್‌ ಕುಮಾರ್ ದ್ವಜಾರೋಹಣಗೈದು ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡಾಪಟುಗಳಿಂದ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿ , ಕ್ರೀಡೆ ನಮ್ಮ ಜೀವನದಲ್ಲಿ ಬಹಳ ಮುಖ್ಯ ಪಾತ್ರವಹಿಸುತ್ತದೆ. ಕ್ರೀಡೆಯಿಂದ ನಮ್ಮೊಳಗೆ ಹುದುಗಿರುವ ಶಕ್ತಿ 

ಅನಾವರಣಗೊಳ್ಳುತ್ತದೆ. ನಮ್ಮ ವಲಯ ಮಟ್ಟದ ಮಕ್ಕಳು ಕ್ರೀಡೆಯಲ್ಲಿ ಮುಂದೆ ರಾಜ್ಯ ರಾಷ್ಟ್ರವನ್ನು ಪ್ರತಿನಿಧಿಸುವಂತ್ತಾಗಲಿ ಎಂದು ಶುಭ ಹಾರೈಸಿದರು.

ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ತೆಂಕಮಿಜಾರು ಗ್ರಾಪಂ ಸದಸ್ಯೆ ಲಕ್ಷ್ಮೀ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷತೋಡಾರು 

ದಿವಾಕರ ಶೆಟ್ಟಿ, ದಾನಿ ಅಬ್ದುಲ್ ಸಲಾಂ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್‌ ವೈ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ರಾಜಶ್ರೀ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಸಿರ್‌ಪಿ ಗೋಪಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.


Post a Comment

0 Comments