ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ರವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಮಂಗಳೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರು ಈ ಸಂದರ್ಭದಲ್ಲಿ ಎ.ಜೆ. ಆಸ್ಪತ್ರೆಯಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ,ಶಾಸಕ ಭರತ್ ಶೆಟ್ಟಿ ಮತ್ತಿತರರು ಹಾಜರಿದ್ದರು.
0 Comments