ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿದ್ದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಭೂಮಿ ಪೂಜೆ ನೆರವೇರಿಸಿದರು. ಈ ಹಿಂದೆ ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ರಾಜ್ಯಾಧ್ಯಕ್ಷರು ಭರವಸೆ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಮುಂದಿನ ಮೇ ತಿಂಗಳ ಒಳಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಬಗ್ಗೆ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ಸಂಜೀವ ಮಠಂದೂರು ಹಾಗೂ ಇತರೆ ಬಿಜೆಪಿ ನಾಯಕರು ಹಿಂದೂ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
0 Comments