ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಇದೇ ನ.25 ರಂದು ಮೂಡಬಿದಿರೆ ತಾಲೂಕಿನ ಇರುವೈಲು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವರು ಮೂಡಬಿದಿರೆ ತಾಲೂಕಿನ ಇರುವೈಲು ಗ್ರಾಮದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸಲಿದ್ದಾರೆ. ಅದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments