ಡಾ.ಶಿವರಾಮ ಕಾರಂತ ಜನ್ಮ ದಿನೋತ್ಸವದ ಅಂಗವಾಗಿ ಉಡುಪಿಯಲ್ಲಿ ಜರುಗಿದ ಉಭಯ ಜಿಲ್ಲಾ ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ ಪ್ರತಿನಿಧಿಗಳಿಗಾಗಿ ಆಯೋಜಿಸಿದ ಹೊಳಪು- ಕ್ರೀಡಾಕೂಟದಲ್ಲಿ ಮೂಡುಬಿದಿರೆ ಪುರಸಭಾ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿಂದೆಯೂ ಈ ತಂಡ ಚಾಂಪಿಯನ್ ಆಗಿತ್ತು.
ವಿವಿಧ ಸ್ಪರ್ಧೆಗಳಲ್ಲಿ ಪುರಸಭಾ ತಂಡದ ಪುರುಷರು ಹಾಗೂ ಮಹಿಳಾ ತಂಡಗಳು ಪ್ರತ್ಯೇಕವಾಗಿ ಪ್ರಥಮ, ದ್ವಿತೀಯ ಸ್ಥಾನಗಳನ್ನು ಪಡೆಯುವುದರೊಂದಿಗೆ ಚಾಂಪಿಯನ್ ಆಗಲು ಸಾಧ್ಯವಾಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಮುಖ್ಯಾಧಿಕಾರಿ ಇಂದು ಎಮ್.ಪುರಸಭಾ ಸದಸ್ಯರು ಭಾಗವಹಿಸಿದ್ದರು.
ಮೂಡುಬಿದಿರೆಗೆ ಹೆಸರು ತಂದ ಪುರಸಭಾ ತಂಡಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಅಭಿನಂದಿಸಿದ್ದಾರೆ.
0 Comments