ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

 

ಮೂಡುಬಿದಿರೆ : ಇಲ್ಲಿನ ನ್ಯಾಚುರೋಪತಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19ವ) ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.

 ಆಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಆತ್ಮಹತ್ಯೆಗೈದಿದ್ದಾಳೆಂದು ತಿಳಿದು ಬಂದಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments

Advertisement