ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಆಗಿರುವ ಗೊಂದಲ ಮತ್ತು ಹೆಸರು ತೆಗೆದಿರುವ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಅಭಯಚಂದ್ರ ಜೈನ್ ಹಾಗೂ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಮಿಥುನ್ ರೈ ನೇತೃತ್ವದಲ್ಲಿ ಮೂಡುಬಿದಿರೆ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿ ಅಗ್ರಹಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಕೆಪಿಸಿಸಿ ಸದಸ್ಯ ಚಂದ್ರಹಾಸ ಸನಿಲ್, ಮೂಡುಬಿದಿರೆ ವಲಯದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಇಕ್ಬಾಲ್ ಕರೀಂ, ಕೊರಗಪ್ಪ, ಜೊಸ್ಸಿ ಮಿನೇಜಸ್, ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ,ವಾಲ್ಪಾಡಿ ಗ್ರಾ.ಪಂ.ಸದಸ್ಯ ಅರುಣ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಸೇವಾ ದಳದ ಪ್ರಮುಖರಾದ ವಾಸುದೇವ ನಾಯಕ್, ರಾಜೇಶ್ ಕಡಲಕೆರೆ ಮತ್ತಿತರರು ಈ ಸಂದರ್ಭದಲ್ಲಿದ್ದರು.
0 Comments