ಮೂಡುಬಿದಿರೆ: ಇಲ್ಲಿನ ಸರ್ಕಾರಿ ಪ್ರೌಢ ಶಾಲೆ ಅಳಿಯೂರಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಒಂದು ದಿನದ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕ ಸುಬ್ರಮಣ್ಯ ವಿ. ವಹಿಸಿದ್ದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ, ಅಂತರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರಾದ ಅಶ್ವಿನ್ ಕುಮಾರ್ ಎಂ. ರವರು ವಿವಿಧ ಅವಘಡದ ಸನ್ನಿವೇಶಗಳಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ಜೀವ ರಕ್ಷಣಾ ತಂತ್ರಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಮನನ ಮಾಡಿದರು.
ಶಾಲೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ಸದಸ್ಯರು ಹಾಗೂ ಶಾಲೆಯ ಎಲ್ಲಾ ಶಿಕ್ಷಕ ವೃಂದ ಈ ಸಂದರ್ಭದಲ್ಲಿದ್ದರು.
ಜೂನಿಯರ್ ರೆಡ್ ಕ್ರಾಸ್ ಘಟಕದ ಸಂಚಾಲಕ ಡಾ. ಆನಿ ಡಿಂಪಲ್ ಕ್ಯಾಸ್ತಲಿನೊ ಸ್ವಾಗತಿಸಿದರು.
0 Comments