ತಾಲೂಕು‌ ಮಟ್ಟದ ಗ್ರಾಮೀಣ ಕ್ರೀಡಾಕೂಟ

ಜಾಹೀರಾತು/Advertisment
ಜಾಹೀರಾತು/Advertisment

ಮೂಡುಬಿದಿರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿ.ಪಂಚಾಯತ್ ಮಂಗಳೂರು ಹಾಗೂ ತಾಲೂಕು ಪಂಚಾಯತ್ ಮೂಡುಬಿದಿರೆ ಇವುಗಳ ನೇತೃತ್ವದಲ್ಲಿ ಸ್ವರಾಜ್ಯ ಮೈದಾನದಲ್ಲಿ ಮಂಗಳವಾರ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ನಡೆಯಿತು.

  ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ , ಬಲೂನನ್ನು ಬಾನೆತ್ತರಕ್ಕೆ ಹಾರಿಸಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

 ನಂತರ ಮಾತನಾಡಿದ ಅವರು ಆರೋಗ್ಯಪೂರ್ಣವಾದ ಜೀವನ ನಡೆಸಲು ಕ್ರೀಡೆಗಳು ಅಗತ್ಯವಾಗಿ ಬೇಕು. ಗ್ರಾಮೀಣ ಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ರಾಹಿಸಬೇಕೆಂಬ ಉದ್ದೇಶದಿಂದ ಸರಕಾರವು ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ತಾಲೂಕು ಮಟ್ಟದ ಈ ಕ್ರೀಡಾಕೂಟದಲ್ಲಿ ವಿಜೇತರಾಗುವ ಕ್ರೀಡಾಪಟುಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಆಯ್ಕೆಯಾಗುತ್ತಾರೆ ಎಂದು ಹೇಳಿದರು.

  ರಾಜ್ಯ ನೌಕರರ ಸಂಘದ ಅಧ್ಯಕ್ಷ ನಾಗೇಶ್ , ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಹಾಯಕ ನಿರ್ದೇಶಕ ರಮೇಶ್ ರಾಥೋಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

 ತಾ.ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಸ್ವಾಗತಿಸಿದರು. ತೆಂಕಮಿಜಾರು ಗ್ರಾ.ಪಂ. ಸಿಬಂದಿ ರಾಕೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕಿನ 12 ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

Post a Comment

0 Comments