ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ.
ನರೇಗಾ ಯೋಜನೆಯ ಮಾದರಿಯನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿರುವುದು ಅತ್ಯಾಕರ್ಷಕವಾಗಿದೆ.
ಟಿ.ವಿ. ಮೂಲಕ ಜಿಲ್ಲೆಯಲ್ಲಿ ಅನುಷ್ಟಾನಿಸಿದ ಕಾಮಗಾರಿಗಳನ್ನು ಪ್ರದರ್ಶಿಸಲಾಗುತ್ತಿದೆ. ಹಾಗೂ ಯೋಜನೆಗೆ ಬೇಕಾದ ಅಗತ್ಯ ದಾಖಲೆ, ಪ್ರಯೋಜನಗಳ ಕುರಿತು ಸ್ಟ್ಯಾಂಡ್, ಫ್ಲೆಕ್ಸ್ ಹಾಗೂ ಕರಪತ್ರಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ.
0 Comments