ಸಂಸದ ನಳಿನ್ ಜೊತೆಗೆ ಪ್ರಧಾನಿ ಮೋದಿ ಭೇಟಿಯಾದ ಸಚಿವ ಕೋಟ:ಇಲಾಖೆಯ ಸಾಧನೆಯ ಮಾಹಿತಿ ನೀಡಿದ ಸಚಿವರು

ಜಾಹೀರಾತು/Advertisment
ಜಾಹೀರಾತು/Advertisment


 ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಜ್ಯದ ಸಮಾಕ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿಯಾಗಿ ಮಾತುಕತೆ ನಡೆಸಿದರು.

ಮಂಗಳೂರು ಸಂಸದರು ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ರವರ ಜೊತೆಗೆ ಪ್ರಧಾನಿಗಳನ್ನು ಭೇಟಿಯಾದ ಸಚಿವರು ಪ್ರಧಾನಿ ಭೇಟಿಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. 


ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಆಧರಣೀಯ ಮತ್ಸ್ಯ ದೇವತೆಯ ಸ್ಮರಣಿಕೆಯನ್ನು ಜಿಲ್ಲೆಯ ಜನತೆಯ ಪರವಾಗಿ ಸನ್ಮಾನ್ಯ ಪ್ರಧಾನಮಂತ್ರಿಯವರಿಗೆ ನೀಡಿದರು.

"ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲು ರವರು ಇಂದು ದೆಹಲಿ ಪಾರ್ಲಿಮೆಂಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿದರು. ನಮ್ಮ ಇಲಾಖೆಯ ಯೋಜನೆ ಮತ್ತು ಯೋಚನೆಗಳನ್ನು ಮೋದಿಯವರಿಗೆ ವಿವರಿಸಿ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಆಧರಣೀಯ ಮತ್ಸ್ಯ ದೇವತೆಯ ಸ್ಮರಣಿಕೆಯನ್ನು ಜಿಲ್ಲೆಯ ಜನತೆಯ ಪರವಾಗಿ ಸನ್ಮಾನ್ಯ ಪ್ರಧಾನಮಂತ್ರಿಯವರಿಗೆ ನೀಡುವ ಸುವರ್ಣಾವಕಾಶ ದೊರಕಿತು."-ಕೋಟ

Post a Comment

0 Comments