ವಿಶ್ವ ಜಾಂಬೂರಿಗೆ ಮುನೀರ್ ಅಪಸ್ವರ:ಸಾರ್ವಜನಿಕರ ಆಕ್ರೋಶ

ಜಾಹೀರಾತು/Advertisment
ಜಾಹೀರಾತು/Advertisment

 ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಅಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಡಿಸೆಂಬರ್ 21 ರಿಂದ ನಡೆಯಲಿರುವ ವಿಶ್ವ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ  ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ರಾಜ್ಯ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ದೇಣಿಗೆ ನೀಡಲು ಕರೆ ನೀಡಿದ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಗಳಿಂದ ಸಂಗ್ರಹಿಸಿದ ಹಣವನ್ನು ಶಿಕ್ಷಣ ಸಂಸ್ಥೆಗೆ ಹಸ್ತಾಂತರಿಸಿದ ಬಗ್ಗೆ ಪತ್ರಿಕಾ ಮಾಧ್ಯಮದಲ್ಲಿ ಸುದ್ದಿ ಬಂದ ಹಿನ್ನಲೆಯಲ್ಲಿ ಈ ಸುದ್ದಿಯ ಪ್ರತಿಯನ್ನು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿದ ಮುನೀರ್ ಕಾಟಿಪಳ್ಳ ಈ ಜಾಂಬೂರಿಯ ಕಾರ್ಯಕ್ರಮಕ್ಕೆ 40 ಕೋಟಿ ಖರ್ಚು ಯಾವ ಕಾರಣಕ್ಕಾಗಿ ಮತ್ತು ಸರ್ಕಾರಿ ಕಾರ್ಯಕ್ರಮವನ್ನು  ಖಾಸಗಿ ಶಿಕ್ಷಣ ಸಂಸ್ಥೆಯವರು ಕೈಗೊಳ್ಳುತ್ತೀರುವುದು ಯಾಕೆ ಎಂಬ ಪ್ರಶ್ನೆಯನ್ನು ಇಟ್ಟಿದ್ದಾರೆ. ಮತ್ತು ಈ ಪ್ರಶ್ನೆಗಳಿಗೆ ಸಂಸದರು ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಜಿಲ್ಲಾ ಅಧಿಕಾರಿಗಳು ಉತ್ತರಿಸಬೇಕು ಎಂದು ಪ್ರಶ್ನಿಸಿದರು. ಸದ್ಯ ಮುನೀರ್ ಕಾಟಿಪಳ್ಳ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಶ್ವ ಸಾಂಸ್ಕೃತಿಕ ಕಾರ್ಯಕ್ರಮವು ಭಾರತದಲ್ಲಿ ಈ ಬಾರಿ ಆಯೋಜಿಸಿರುವುದು ಹೆಮ್ಮೆಯ ಪ್ರತೀಕವಾಗಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ  ಈ ಅವಕಾಶ ಲಭಿಸಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಧನ್ಯತೆಯ ಕ್ಷಣವಾಗಿದೆ.ಇಂತಹ ಒಂದು ಅದ್ದೂರಿ ಹಾಗೂ ಐತಿಹಾಸಿಕ ಕಾರ್ಯಕ್ರಮಕ ಅಡ್ಡಿ ವ್ಯಕ್ತ ಪಡಿಸುತ್ತಿರುವ  ಮುನೀರ್ ಕಾಟಿಪಳ್ಳರಂತಹ ಸೋಕಾಲ್ಡ್ ನಕಲಿ ಸಾಮಾಜಿಕ ಕಾರ್ಯಕರ್ತರಿಗೆ ಧಿಕ್ಕಾರವಿರಲಿ ಎಂಬ ಆಕ್ರೋಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ. ಸದಾ ಒಂದಲ್ಲ ಒಂದು ಕಾರಣಗಳಿಂದ ಟ್ರೋಲ್ ಆಗುತ್ತಿರುವ ಮುನೀರ್ ಕಾಟಿಪಳ್ಳ ಈಗ ಅವಕಾಶವಿಲ್ಲದೆ ವಿಶ್ವ ಜಾಂಬೂರಿ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಸಾರ್ವಜನಿಕರು ಎಂದು ಸಾಮಾಜಿಕ ಜಾಲತಾನದಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


Post a Comment

0 Comments