ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮಂದೀಪ್ ರೈಗೆ ಹೃದಯಾಘಾತ ಸಂಭವಿಸಿದ್ದು, ಮಂದೀಪ್ ಸದ್ಯ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಂದಿಪ್ ರೈ ಚಿಕಿತ್ಸೆಗೆ ಆರ್ಥಿಕ ನೆರವು ಬೇಕಾಗಿದೆ.
ಕನ್ನಡದಲ್ಲಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಅನಂತ್ ನಾಗ್ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು. ಮಿಂಚಿನ ಓಟ, ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೋಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ, ಆಂಟಿ ಪ್ರೀತ್ಸೆ, ಪ್ರೀತ್ರೋದ್ ತಪ್ಪ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ನಟ ಅಣ್ಣಾದ್ರಿಂದ ಹಿಡಿದು ಎಲ್ಲಾ ದಿಗ್ಗಜರ ಜೊತೆ ಅಭಿನಯಿಸಿದ್ದಾರೆ.
0 Comments