ಮೂಡುಬಿದಿರೆ:ಭಾರತೀಯ ಮಜ್ದೂರು ಸಂಘ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ (ರಿ) ಮೂಡುಬಿದಿರೆ ತಾಲೂಕು ಸಮಿತಿ ಇದರ ನೂತನ ಕಾರ್ಯಾಲಯದ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಾಗಾರ ಡಿವೈನ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಶಾಸಕ ಉಮಾನಾಥ ಎ.ಕೋಟ್ಯಾನ್ ಕಾರ್ಯಾಲಯ ಮತ್ತು ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಭಾರತೀಯ ಮಜ್ದೂರು ಸಂಘದ ಮೂಡುಬಿದಿರೆಯ ಅಧ್ಯಕ್ಷ ರಾಜೇಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಬಿಎಂಎಸ್ ನ ಜಿಲ್ಲಾ ಅಧ್ಯಕ್ಷ ವಕೀಲ ಅನಿಲ್ ಕುಮಾರ್ , ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ತಾಲೂಕು ಪ್ರಭಾರಿ ಪ್ರಮೋದ್ ರಾಜ್ ಪೆರಾಡಿ, ಮಂಜುನಾಥ ಶೆಟ್ಟಿ ಬೆಳುವಾಯಿ, ವಕೀಲ ಪ್ರವೀಣ್ ಲೋಬೋ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರಧಾನ ಕಾರ್ಯದರ್ಶಿ ಸಂದೀಪ್ ಶೆಟ್ಟಿ ವಂದಿಸಿದರು.
ಉಪನ್ಯಾಸಕ ಸುದೀಪ್ ಬುನ್ನನ್ ಕಾರ್ಯಕ್ರಮ ನಿರೂಪಿಸಿದರು..
0 Comments