ಮೂಡುಬಿದಿರೆ ವಕೀಲರ ಭವನ ಲೋಕಾರ್ಪಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ವಕೀಲರ ಭವನ ಲೋಕಾರ್ಪಣೆ

ಹಿರಿಯ ಸಿವಿಲ್ ನ್ಯಾಯಾಧೀಶರು-ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ 





ಮೂಡುಬಿದಿರೆ: ದ.ಕ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡುಬಿದಿರೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಿರುವ ವಕೀಲರ ಭವನ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವನ್ನು ಸುಪ್ರೀಂ ಕೋಟ್ ೯ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಶುಕ್ರವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇದು ಬೌದ್ಧಿಕ ಚರ್ಚೆಗಾಗಿ ಇರುವಂತಹ ಭವನ.ವಕೀಲರ ಸಂಘದಲ್ಲಿ ಶೇಕಡಾವಾರು ವ್ಯವಹಾರ ನಡೆಯುವುದಿಲ್ಲ. ಇಲ್ಲಿ ನ್ಯಾಯ ಕೇಳಿಕೊಂಡು ಬಂದವರಿಗೆ ತಡ ಮಾಡದೆ, ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸಲು ವಕೀಲರು ಕಟಿಬದ್ಧರಾಬೇಕು. ಕಮೀಷನ್‌ಗಾಗಿ ಕಕ್ಷಿಗಾರರನ್ನು ಸತಾಯಿಸುವುದು ಸರಿಯಲ್ಲ ಎಂದ ಅವರು ವಕೀಲರು ತ್ವರಿತಗತಿಯಲ್ಲಿ ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸಬೇಕೆಂದು ಸಲಹೆ ನೀಡಿದರು.

 


 ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹೈಕೋಟ್ ೯ನ ನ್ಯಾಯಮೂರ್ತಿಗಳಾದ ಬಿ.ವೀರಪ್ಪ, ಹೈಕೋರ್ಟ್ನ ನ್ಯಾಯಮೂರ್ತಿ ಹಾಗೂ ದ.ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಮುಖ್ಯ ಅತಿಥಿಗಳಾಗಿದ್ದರು. ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರು, ಎಸ್.ವಿಶ್ವಜಿತ್ ಶೆಟ್ಟಿ, ಸಿ.ಎಂ ಜೋಶಿ, ಟಿ.ಜಿ ಶಿವಶಂಕರೇ ಗೌಡ, ಕೆ.ಎಸ್ ಭರತ್ ಕುಮಾರ್, ದ.ಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ.ಜೋಶಿ, ಶಾಸಕ ಉಮಾನಾಥ ಕೋಟ್ಯಾನ್, ಹೈಕೋಟ್ ೯ನ ಮಹಾವಿಲೇಖಾನಾಧಿಕಾರಿ ಮುರಳೀಧರ ಪೈ ಬಿ., ಹಿರಿಯ ವಕೀಲ ಪಿ.ಪಿ ಹೆಗ್ಡೆ, ಮೂಡುಬಿದಿರೆ ವಕೀಲರ ಸಂಘದ ಸ್ಥಾಪಕಾಧ್ಯಕ್ಷ ಎಂ.ಬಾಹುಬಲಿ ಪ್ರಸಾದ್,

  ಪ್ರಧಾನ ಕಾರ್ಯದರ್ಶಿ ಪ್ರವೀಣ್ ಎಸ್.ಲೋಬೊ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಕಾಂತರಾಜು ಬಿ.ಟಿ, ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಯಶವಂತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ಸುಪ್ರಿಂ ಕೋಟ್ ೯ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಅವರನ್ನು ಸನ್ಮಾನಿಸಲಾಯಿತು.

ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಎಂ.ಕೆ ದಿವಿಜೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಶ್ವೇತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments