ಬೈಕ್ ಗೆ ಬಸ್ಸು ಢಿಕ್ಕಿ : ಬೈಕ್‌ ಸವಾರ ಸಾವು

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ: ಜಾಂಬೂರಿ ಮುಗಿಸಿಕೊಂಡು ಮಕ್ಕಳನ್ನು ಕರೆದೊಯ್ಯುತ್ತಿದ್ದ ಉಡುಪಿ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ತೀವೃವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾಂತಾವರ ಕ್ರಾಸ್ ಬಳಿ ಮಂಗಳವಾರ ನಡೆದಿದೆ.

 ಕಾಂತಾವರ ನಿವಾಸಿ ಸುಧಾಕರ ಎಂಬವರ ಪುತ್ರ ಸುಖಾಂತ್ ( 22) ಮೃತಪಟ್ಟ ಯುವಕ.

   ಸುಖಾಂತ್ ಮೂಡುಬಿದಿರೆ ಕಡೆಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದು ಮೂಡುಬಿದಿರೆಯಲ್ಲಿ ಜಾಂಬೂರಿ ಕಾರ್ಯಕ್ರಮ ನೋಡಿಕೊಂಡು ವಾಪಾಸು  ಹೋಗುತ್ತಿದ್ದ ಉಡುಪಿ ಸಮೀಪದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ  ಬಸ್ದು ಢಿಕ್ಕಿ ಹೊಡೆಯಿತೆನ್ನಲಾಗಿದೆ. ಈ ಸಂದರ್ಭದಲ್ಲಿ ರಸ್ತೆಗೆಸೆಯಲ್ಪಟ್ಟ ಸುಖಾಂತ್ ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಅಧಿಕ ರಕ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments