ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಸಹೋದರ ಹೃದಯಾಘಾತದಿಂದ ನಿಧನ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 


ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಸಹೋದರ, ಹೈಕೋರ್ಟ್ ವಕೀಲ ಫಾರೂಕ್ (49) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿರುವ ಫಾರೂಕ್ ಅವರು ಇದೀಗ ಹೈಕೋರ್ಟ್‌ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇಂದು ಬೆಳಗ್ಗೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮೂಡಬಿದಿರೆಗೆ ತಂದು ಅಂತ್ಯಕ್ರಿಯೆ ನಡೆಸಲಾಗುತ್ತದೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

Post a Comment

0 Comments

Advertisement