ಜ.20 ಬಳಕೆದಾರ ಜಾಗೃತಿ ವೇದಿಕೆ ಪದಗ್ರಹಣ

ಜಾಹೀರಾತು/Advertisment
ಜಾಹೀರಾತು/Advertisment

 ಜ.20 ಬಳಕೆದಾರ ಜಾಗೃತಿ ವೇದಿಕೆ ಪದಗ್ರಹಣ

ಮೂಡುಬಿದಿರೆ: ಕಳೆದ 35 ವರ್ಷಗಳಿಂದ ಮೂಲ್ಕಿ, ಮೂಡುಬಿದಿರೆ ತಾಲೂಕುಗಳಲ್ಲಿ ಕಾರ್ಯಚರಿಸುತ್ತಿರುವ ಬಳಕೆದಾರ ಜಾಗೃತಿ ವೇದಿಕೆ ಕಿನ್ನಿಗೋಳಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.20ರಂದು ಮೂಡುಬಿದಿರೆ ಸಮಾಜಮಂದಿರದಲ್ಲಿ ಸಂಜೆ 5.00 ಗಂಟೆಗೆ ನಡೆಯಲಿದೆ ಎಂದು ವೇದಿಕೆಯ ನೂತನ ಅಧ್ಯಕ್ಷ ಅರುಣ್ ಪ್ರಕಾಶ್ ಶೆಟ್ಟಿ ತಿಳಿಸಿದರು.


ಅವರು  ಮಂಗಳವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ  ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಕ್ಷೇತ್ರದ  ಶಾಸಕ ಉಮಾನಾಥ ಎ.ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರ ಗೌರವ ಉಪಸ್ಥಿತಿಯಲ್ಲಿ  ಜಿಲ್ಲಾಧಿಕಾರಿ ರವಿ ಕಮಾರ್ ಎಂ.ಆರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ದ.ಕ ಗ್ರಾಹಕರ ದೂರು ಪರಿಹಾರ ವೇದಿಕೆಯ ನ್ಯಾಯಾಧೀಶ ಪ್ರಕಾಶ್ ಕೆ., ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಎನ್ ಮಾಣಿಕ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಳಕೆದಾರರ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಪದ್ಮನಾಭ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ವೇದಿಕೆಯ ಕಚೇರಿಯು ಕಿನ್ನಿಗೋಳಿಯಲ್ಲಿದ್ದು, ಶೀಘ್ರದಲ್ಲಿ ಮೂಡುಬಿದಿರೆಯಲ್ಲಿ ಕಚೇರಿ ತೆರೆಯಲಾಗುವುದು ಎಂದು ಅರುಣ್ ಪ್ರಕಾಶ್ ಶೆಟ್ಟಿ ತಿಳಿಸಿದರು. 

ಪ್ರಧಾನ ಕಾರ್ಯದರ್ಶಿ ಡಾ.ಶಿವರಾಜ್ ಅರಸ್, ಜೊತೆ ಕಾರ್ಯದರ್ಶಿ ದಯಾನಂದ ನಾಯ್ಕ್, ಸಂಯೋಜಕ ಡಾ.ರವೀಶ್ ಕುಮಾರ್ ಎಂ., ವೇದಿಕೆಯ ಪ್ರಮುಖರಾದ ಪದ್ಮನಾಭ ಶೆಟ್ಟಿ, ಜೈಸನ್ ತಾಕೋಡೆ,  ಸುದ್ದಿಗೋಷ್ಠಿಯಲ್ಲಿದ್ದರು.

Post a Comment

0 Comments