ಜನಸ್ಪಂದನಾ ಕಾರ್ಯಕ್ರಮ,
ಪುರಸಭಾ ವ್ಯಾಪ್ತಿಯ 240 ಮಂದಿಗೆ ಹಕ್ಕುಪತ್ರ ವಿತರಣೆ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮದಲ್ಲಿ 240 ಮಂದಿಗೆ ಹಕ್ಕುಪತ್ರ ವಿತರಣೆ,36 ಮಂದಿಗೆ ಪಿಂಚಣಿ ಆದೇಶಪತ್ರ ಹಾಗೂ ಕಾರ್ಮಿಕ ಇಲಾಖೆಯಿಂದ ಕೊಡಲ್ಪಟ್ಟ ಕಿಟ್ಟುಗಳನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಮಂಗಳವಾರ ಕನ್ನಡಭವನದಲ್ಲಿ ವಿತರಿಸಿದರು.
ನಂತರ ಮಾತನಾಡಿದ ಕೋಟ್ಯಾನ್ ಮನೆಕಟ್ಟುವುದು ಪ್ರತಿಯೊಬ್ಬನ ಜೀವನದ ಕನಸು. ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಕೆಲಸವನ್ನು ನಿರಂತರ ಮಾಡುತ್ತಾ ಬಂದಿದ್ದೇನೆ. ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಲು ನಿರಂತರ ಹೋರಾಟ ನಡೆಸಿದ್ದು ಕ್ಷೇತ್ರದಲ್ಲಿ ಡೀಮ್ಡ್ ವಿರಹಿತವಾದ 2400 ಮಂದಿಗೆ ಹಕ್ಕುಪತ್ರ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಕರಾವಳಿ ಭಾಗದ ಪ್ರಮುಖ ಬೇಡಿಕೆಯಾದ ಕುಮ್ಕಿ ಜಮೀನಿನ ಹಕ್ಕು ನೀಡುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು ಇದಕ್ಕೂ ಪರಿಹಾರ ಸಿಗಲಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷ ಸುಜಾತ ಶಶಿಕಿರಣ್, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಕೆಎಂಎಫ್ ಅಧ್ಯಕ್ಷ ಕೆ.ಪಿ ಸಚರಿತ ಶೆಟ್ಟಿ, ಪುರಸಭೆ ವಿಪಕ್ಷ ನಾಯಕ ಪಿ.ಕೆ ಥೋಮಸ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಶಕುಂತಳಾ ದೇವಾಡಿಗ, ರಾಜೇಶ್ ನಾಯ್ಕ್, ಮುಖ್ಯಾಧಿಕಾರಿ ಇಂದು ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ . ತಹಸೀಲ್ದಾರ್ ಸಚ್ಛಿದಾನಂದ ಸತ್ಯಪ್ಪ ಕುಚನೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪತಹಸೀಲ್ದಾರ್ ರಾಮ ಕಾರ್ಯಕ್ರಮ ನಿರ್ವಹಿಸಿದರು.
0 Comments