ಪುತ್ತೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಹಿತ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಬಹುದಿನಗಳ ಬೇಡಿಕೆಯಾದ ರೈಲ್ವೆ ಓವರ್ ಬ್ರಿಡ್ಜ್‌ಗೆ ಸಂಸದರ ಮನವಿಯ ಮೇರೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ.
ಮಂಗಳೂರು-ಹಾಸನ ಜಂಕ್ಷನ್ ಆಗಿರುವ ಪುತ್ತೂರು ಕಬಕದ ನೆಹರು ನಗರದಲ್ಲಿ ಸುಗಮ ಸಂಚಾರಕ್ಕೆ ತೊಡಕುಂಟಾಗಿತ್ತು. ಪುತ್ತೂರು ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕವು ತ್ರಾಸದಾಯಕವಾಗಿತ್ತು. ಈ ಬಗ್ಗೆ ಸ್ಥಳೀಯರು ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲುರವರ ಬಳಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದ್ದರು.
ಈ ಬಗ್ಗೆ ಸಂಸದ ನಳಿನ್ ಕೇಂದ್ರ ಸರ್ಕಾರದ ಬಳಿ ವಿವರಣೆ ನೀಡಿದ್ದು ಈ ಸ್ಥಳದಲ್ಲಿ ರೈಲ್ವೆ ಓವರ್ ಬ್ರಿಡ್ಜ್ ನಿರ್ಮಿಸಲು 5.35 ಕೋಟಿ ಮೊತ್ತದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಸಂಸದರು ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ರವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
0 Comments