ಮೂಡುಬಿದಿರೆಯ ಕಡಲಕೆರೆಯ ಬಳಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನದ ಶಿಲಾನ್ಯಾಸ ಕಾರ್ಯಕ್ರಮ ನಡೆಸಿದ್ದು ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಉಮನಾಥ್ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದಿರೆ, ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಮೂಡಾ ಅಧ್ಯಕ್ಷರಾದ ಮೇಘನಾಥ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷರಾದ ಸುನಿಲ್ ಆಳ್ವಾ, ಪುರಸಭಾ ಸ್ಥಾಯೀ ಸಮಿತಿಯ ಅಧ್ಯಕ್ಷರಾದ ನಾಗರಾಜ ಪೂಜಾರಿ ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.
0 Comments