ಸ್ವಾಮಿ ವಿವೇಕಾನಂದರ ಜನ್ಮ ಜಯಂತಿಯ ಪ್ರಯುಕ್ತ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಯುವ ದಿನೋತ್ಸವ ಕಾರ್ಯಕ್ರಮದ ಅಂಗವಾಗಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ಯೋಗಾಥಾನ್ ಕಾರ್ಯಕ್ರಮ ನಡೆಯಿತು.
ಸಹಸ್ರಾರು ವಿದ್ಯಾರ್ಥಿನಿಯರು ಏಕಕಾಲದಲ್ಲಿ ಯೋಗಾಭ್ಯಾಸ ಮಾಡಿದ್ದು ಹೊಸ ಇತಿಹಾಸ ಬರೆಯಲಾಗಿದೆ. ಆಳ್ವಾಸ್ ಪುತ್ತಿಗೆ ಶ್ರೀಪತಿ ಭಟ್ ವೇದಿಕೆಯಲ್ಲಿ ನಡೆದ ಯೋಗಥಾನ್ youth for yoga ಕಾರ್ಯಕ್ರಮವನ್ನು ಮೂಡುಬಿದಿರೆಯ ಜೈನ ಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಎಂ ಮೋಹನ್ ಆಳ್ವ, ಜಿಲ್ಲಾಧಿಕಾರಿ ರವಿ ಕುಮಾರ್ ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್, ತಹಶೀಲ್ದಾರ್ ಸಚ್ಚಿದಾನಂದ ಮೊದಲಾದವರು ಉಪಸ್ಥಿತರಿದ್ದರು.
0 Comments