ಸರ್ಕಾರಿ ಹುದ್ದೆಯನ್ನು ಅಲಂಕರಿಸಿಯೂ ಧರ್ಮ ಧರ್ಮಗಳ ಬಗ್ಗೆ ನಿರಂತರವಾಗಿ ಅವಹೇಳನ ಮಾಡುತ್ತಿದ್ದ ಪುತ್ತೂರು ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿಯನ್ನು ಕೆಲಸದಿಂದ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಸಂಜೀವ ಪೂಜಾರಿ ಎನ್ನುವ ವ್ಯಕ್ತಿ ಅರಣ್ಯ ಇಲಾಖೆಯ ಅಧಿಕಾರಿಯಾಗಿದ್ದು ಹಿಂದೂ ಧರ್ಮದ ಬಗ್ಗೆ ನಿರಂತವಾಗಿ ಅವಹೇಳನ ಮಾಡುತ್ತಿದ್ದ. ಭಜನೆ ಮಾಡುವ ಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಾರೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದ. ಮಾತ್ರವಲ್ಲದೆ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದ.
ಪ್ರಧಾನಿ ನರೇಂದ್ರ ಮೋದಿಯವರು ಹಿಂದಿನ ಪ್ರಧಾನಿಗಳಿಗಿಂತ 10 ಪಟ್ಟು ಹೆಚ್ಚು ಭೀಕರವಾಗಿ ಪ್ರಾಣತ್ಯಾಗ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ. ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪಕ್ಷದ ವಿರುದ್ಧ ನಿರಂತರವಾಗಿ ಹೇಳಿಕೆ ನೀಡುತ್ತಿದ್ದ ಈತನ ವಿರುದ್ಧ ಹಿಂದೂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದವು. ಹಿರಿಯ ಅಧಿಕಾರಿಗಳಿಂದ ಎಚ್ಚರಿಕೆಗೊಳಪಟ್ಟರೂ ಸುಮ್ಮನಿರದ ಈತನ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು, ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಸಹಿತ ಶಾಸಕರು ಹಾಗೂ ಬಿಜೆಪಿ ನಾಯಕರು ಸರ್ಕಾರಕ್ಕೆ ಒತ್ತಡ ಹೇರಿದ್ದು;ಪರಿಣಾಮ ಸಂಜೀವ ಪೂಜಾರಿ ಎಂಬಾತನನ್ನು ಕೆಲಸದಿಂದ ಅಮಾನತುಗೊಳಿಸಿ ಆದೇಶಿಸಿದೆ.
0 Comments