ಗ್ರಾಮ ಪಂಚಾಯತಿ ಸದಸ್ಯರಿಗೆ ಮತ್ತೊಂದು ಶುಭಸುದ್ಧಿ ನೀಡಿದ ಸರ್ಕಾರ: ಸಚಿವರ ಮನವಿಗೆ ಸಿಎಂ ಅಸ್ತು
ಗ್ರಾಮ ಪಂಚಾಯತಿ ಸದಸ್ಯರಿಗೆ ಸಭೆಯಲ್ಲಿ ಭಾಗವಹಿಸುವಿಕೆಗೆ ನೀಡುತ್ತಿದ್ದ 100ರೂ ಶುಲ್ಕವನ್ನು ಹೆಚ್ಚುವರಿಗೊಳಿಸಿ ಸರ್ಕಾರ ಆದೇಶಿಸಿದೆ.
ಗ್ರಾಮ ಪಂಚಾಯತಿಯಲ್ಲಿ ಸಭೆಯಲ್ಲಿ ಭಾಗವಹಿಸಿದ ಸದಸ್ಯರಿಗೆ ನೂರು ರೂಪಾಯಿ ನೀಡಲಾಗುತ್ತಿತ್ತು. ಈ ಶುಲ್ಕವನ್ನು 300ರೂಗಳಿಗೆ ಹೆಚ್ಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಈ ಬಗ್ಗೆ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು ಮತ್ತು ಗ್ರಾಮ ಪಂಚಾಯತಿ ಸದಸ್ಯರಿಂದ ಚುನಾಯಿತರಾದ ಕೋಟ ಶ್ರೀನಿವಾಸ ಪೂಜಾರಿಯವರು ನಿರಂತರವಾಗಿ ಸರ್ಕಾರದ ಗಮನ ಸೆಳೆಯುತ್ತಿದ್ದು ಶುಲ್ಕವನ್ನು ಮೂರು ಪಟ್ಟು ಹೆಚ್ಚಿಸುವಂತೆ ಕೋರಿದ್ದರು. ಇದೀಗ ಸರ್ಕಾರ ಈ ಮನವಿಗೆ ಸ್ಪಂದಿಸಿದೆ.
ಈ ಹಿಂದೆ ಗ್ರಾಮ ಪಂಚಾಯತಿ ಸದಸ್ಯರ ಮಾಸಿಕ ಗೌರವಧನ ಹೆಚ್ಚಿಸಿ ಆದೇಶಿಸಿದ್ದ ಸರ್ಕಾರ ಎರಡು ತಿಂಗಳಲ್ಲಿ ಮತ್ತೊಂದು ಸಿಹಿ ಸುದ್ದಿ ನೀಡಿದ್ದು ಗ್ರಾಮ ಪಂಚಾಯತಿ ಸದಸ್ಯರಲ್ಲಿ ಸಂತಸ ತಂದಿದೆ.
0 Comments