ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್-ಸಚಿವರ ಮನವಿ ಮನ್ನಿಸಿ ಕ್ರಾಂತಿಕಾರಿ ಹೆಜ್ಜೆಯಿಟ್ಟ ಸಿಎಂ

ಜಾಹೀರಾತು/Advertisment
ಜಾಹೀರಾತು/Advertisment

 ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್-ಸಚಿವರ ಮನವಿ ಮನ್ನಿಸಿ ಕ್ರಾಂತಿಕಾರಿ ಹೆಜ್ಜೆಯಿಟ್ಟ ಸಿಎಂ



ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಳಪಡುವ ಪ್ರೌಢಶಾಲಾ ಮಟ್ಟದ ವಸತಿ ಶಾಲೆಗಳಲ್ಲಿ ಪಿಯುಸಿ ಆರಂಭಿಸಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ.



ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಸತಿ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ಮೇಳದ ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದು ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ಬಗ್ಗೆ ಸ್ವತಃ ಸಚಿವರೇ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.


"ಸನ್ಮಾನ್ಯ ಮುಖ್ಯಮಂತ್ರಿಗಳ ಮಾರ್ಗದರ್ಶನದಂತೆ ರಾಜ್ಯದಲ್ಲಿ ನಮ್ಮ ಇಲಾಖೆಗೆ ಒಳಪಡುವ ಸುಮಾರು 600 ವಸತಿ ಶಾಲೆಗಳನ್ನು ಎಸ್.ಎಸ್.ಎಲ್.ಸಿ.ಯಿಂದ ಪಿಯುಸಿಗೆ ಮೇಲ್ದರ್ಜೆಗೇರಿಸಲು ಅವಕಾಶ ಇದೆ.ಈ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿಗೆ ಪ್ರಥಮ ವರ್ಷವೇ 30,000 ವಿದ್ಯಾರ್ಥಿಗಳು ಪಿಯುಸಿ ಸೇರ್ಪಡೆ ಆಗುತ್ತಾರೆ.ಬಡವರ ಮಕ್ಕಳ ಶಿಕ್ಷಣದಲ್ಲಿ ಇದೊಂದು ಕ್ರಾಂತಿಕಾರಿ ಆಗಲಿದೆ. ಮುಂದಿನ ವರ್ಷವೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ"

(ಸಚಿವ ಕೋಟ)

Post a Comment

0 Comments