ಕೋಟ್ಯಾಂತರ ಹಿಂದೂಗಳ ಹೋರಾಟದ ಫಲವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಶ್ರೀರಾಮ ಮಂದಿರದ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ ಆಗಿದೆ.
ಅಯೋಧ್ಯೆಯ ರಾಮಮಂದಿರ ಮುಂದಿನ ವರ್ಷ ಅಂದರೆ 2024ರ ಜನವರಿ 1ಕ್ಕೆ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಘೋಷಿಸಿದ್ದಾರೆ.
ತ್ರಿಪುರಾದ ಸಬ್ರೂಮ್ ಪಟ್ಟಣದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿಳಂಬ ಮಾಡಲು ಯತ್ನಿಸಿತ್ತು ಎಂದು ಇದೇ ವೇಳೆ ಅವರು ಆರೋಪಿಸಿದರು.
0 Comments