ಕರಾವಳಿಗೆ ಎಂಟ್ರಿ ಕೊಡಲಿದ್ದಾರೆ ಸಿಂಗಂ:ತಮಿಳುನಾಡು ಬಿಜೆಪಿ ಅಧ್ಯಕ್ಷರಿಂದ ಮಹಾ ಸಮಾವೇಶ
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದ ನಿವೃತ್ತ ಪೊಲೀಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಐಪಿಎಸ್ ಅಣ್ಣಾಮಲೈ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲುರವರ ಮಹತ್ವಾಕಾಂಕ್ಷೆಯ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ. ಬಂಟ್ವಾಳದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಅಣ್ಣಾಮಲೈ ಭಾಗವಹಿಸಿ ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾರ್ಕಳದಲ್ಲಿ ಪೊಲೀಸ್ ನಿರೀಕ್ಷಕರಾಗಿ ನಂತರ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಂತರ ಬೆಂಗಳೂರು ನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶಿಸ್ತಿನ ಸಿಪಾಯಿಯಾಗಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದರು. ಈ ಮೂಲಕ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದರು.
0 Comments