ಈಡಿಗ, ಬಿಲ್ಲವ, ನಾಮದಾರಿಗಳು ಸೇರಿದಂತೆ 26 ಉಪಪಂಗಡಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ಸಮುದಾಯದ ಬಹುಮುಖ್ಯ ಬೇಡಿಕೆಯಾದ
ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿ ಮುಂದಿನ ಆಯವ್ಯದಲ್ಲಿ ಸೂಕ್ತ ಅನುದಾನ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.
ಈ ಹಿಂದೆ ಈಡಿಗ, ಬಿಲ್ಲವ, ನಾಮದಾರಿಗಳು ಸೇರಿದಂತೆ 26 ಉಪಪಂಗಡಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಒಂದು ಪ್ರತ್ಯೇಕ ಕೋಶ ರಚಿಸಿ ಪ್ರತ್ಯೇಕ ಕಾರ್ಫರ್ಸ್ ಫಂಡ್ ಸ್ಥಾಪಿಸಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು "ಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ" ಸ್ಥಾಪಿಸಲಾಗಿತ್ತು, ಅದನ್ನು ಪರಿವರ್ತಿಸಿ "ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ" ರಚಿಸುವುದಾಗಿ ಘೋಷಿಸಲಾಗಿದೆ.
ನಾರಾಯಣ ಗುರು ಅಭಿವೃದ್ಧಿ ನಿಗಮ ರಚಿಸಬೇಕೆಂಬ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಹಠಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಬೆಂಬಲ ಸೂಚಿಸಿದ್ದರು. ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಒಟ್ಟಾಗಿ ಗಮನ ಸೆಳೆಯೋಣ ಎಂದು ನಳಿನ್ ಕುಮಾರ್ ತಿಳಿಸಿದ್ದರು. ಇಂದು ಖುದ್ದು ರಾಜ್ಯಾಧ್ಯಕ್ಷ ನಳಿನ್ ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ್ದು ನಿಗಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ರಾಜ್ಯಪಾಲರ ಕಾರ್ಯಕ್ರಮದ ನಿಮಿತ್ತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರ ಕನ್ನಡ ಜಿಲಾ ಪ್ರವಾಸದಲ್ಲಿದ್ದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಸಚಿವರು, ಶಾಸಕರು ಮತ್ತು ಸಮಾಜದ ಸ್ವಾಮೀಜಿಯವರ ನಿಯೋಗ ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದರು.
0 Comments