ಉಡುಪಿಯಲ್ಲಿ ಅಟಲ್ ಡಿಂಡಿಮ:ಬಿಜೆಪಿ ಬೃಹತ್ ಮಹಿಳಾ ಸಮಾವೇಶ

ಜಾಹೀರಾತು/Advertisment
ಜಾಹೀರಾತು/Advertisment


ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಮತ್ತು ಗ್ರಾಮಾಂತರ ವತಿಯಿಂದ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ "ಮಾತೃ ಸಂಗಮ ಅಟಲ್ ಕಲರ್" ಬೃಹತ್ ಮಹಿಳಾ ಸಮಾವೇಶ ಹಾಗೂ ಪ್ರತಿಭಾನ್ವಿತ ಮಕ್ಕಳ ಚಿತ್ರಕಲಾ ಉತ್ಸವ ಕಾರ್ಯಕ್ರಮವು ಬ್ರಹ್ಮಾವರ ಶ್ಯಾಮಿಲಿ ಶನಾಯದಲ್ಲಿ ನಡೆಯುತ್ತಿದ್ದು, ಗಣ್ಯರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಮಾಜಿ ಸಂಸದರಾದ ತೇಜಸ್ವಿನಿ ಗೌಡ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಗೀತಾ ವಿವೇಕಾನಂದ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಗೀತಾಂಜಲಿ ಸುವರ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.



Post a Comment

0 Comments