ಸರಕಾರಿ ನೌಕರರ ವೇತನ ಭತ್ಯೆಗಳನ್ನು ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಜಾಹೀರಾತು/Advertisment
ಜಾಹೀರಾತು/Advertisment

 ಸರಕಾರಿ ನೌಕರರ ವೇತನ ಭತ್ಯೆಗಳನ್ನು ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ



ಮೂಡುಬಿದಿರೆ: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರಕಾರವನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ)ವು ಮಾ.1ರಿಂದ ಕೈಗೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ  ಮೂಡುಬಿದಿರೆ ತಾಲೂಕು ಸರಕಾರಿ ನೌಕರರ ಸಂಘವು  ಬೆಂಬಲ ಸೂಚಿಸುತ್ತದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಎಸ್. ತಿಳಿಸಿದ್ದಾರೆ.

 ‌ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

  ಅನಿರ್ಧಿಷ್ಟಾವಧಿ ಮುಷ್ಕರ ಸಂದರ್ಭ ಮನವಿ ಸ್ವೀಕರಿಸಿದ್ದ ಸಚಿವ ಡಾ.ಸುಧಾಕರ ಅವರು ಬೇಡಿಕೆಯ ಈಡೇರಿಸುವ ಭರವಸೆ ನೀಡಿದ್ದರು. ಆದರೆ ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸರಕಾರಿ ನೌಕರರಿಗೆ ನಿರಾಸೆ ಮೂಡಿಸಿದೆ.


.21ರಂದು ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲೆ, ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳ "ತುರ್ತು ರಾಜ್ಯಕಾರಿಣಿ ಸಭೆ" ಯಲ್ಲಿ ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ  ಆಗ್ರಹಿಸಲಿದ್ದೇವೆ.


ಸಂಘದ ಪದಾಧಿಕಾರಿಗಳಾದ ಬಸಪ್ಪ ನಾಶಿ, ಕಿಶೋರ್ ಕುಮಾರ್, ದೊರೆಸ್ವಾಮಿ ಕೆ.ಎಸ್., ಮೆಲ್ವಿನ್ ಅಲ್ಬುಕರ್ಕ್, ದಿನಕರ್ ಎಂ. ಸುದ್ದಿಗೋಷ್ಠಿಯಲ್ಲಿದ್ದರು.

Post a Comment

0 Comments