ಟಿಪ್ಪರ್ ಚಲಾಯಿಸಿ ವ್ಯಕ್ತಿಯ ಕೊಲೆ ಮಾಡಿದಾತ ಸೆರೆ: 14 ದಿನಗಳ ನ್ಯಾಯಾಂಗ ಬಂಧನ

ಜಾಹೀರಾತು/Advertisment
ಜಾಹೀರಾತು/Advertisment

 ಟಿಪ್ಪರ್ ಚಲಾಯಿಸಿ ವ್ಯಕ್ತಿಯ ಕೊಲೆ ಮಾಡಿದಾತ ಸೆರೆ: 14 ದಿನಗಳ ನ್ಯಾಯಾಂಗ ಬಂಧನ



ಮೂಡುಬಿದಿರೆ : ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಯ ತಲೆಯ ಮೇಲೆ  ರಾಡ್ ನಿಂದ ಹೊಡೆದು ಬಿದ್ದ ನಂತರ  ಆತನ ಮೇಲೆ ಟಿಪ್ಪರ್ ಚಲಾಯಿಸಿ ಕೊಲೆ ಮಾಡಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ಉಲಾಯಿಬೆಟ್ಟುವಿನಲ್ಲಿ ಬಂಧಿಸಿದ್ದಾರೆ. 

ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಕೊಲೆ ಮಾಡಿ ಬಂಧಿತನಾಗಿರುವ ವ್ಯಕ್ತಿ. ಈತ ಕಳೆದ ಶುಕ್ರವಾರದಂದು 

 ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಎಂಬವರ ಮೇಲೆ ಟಿಪ್ಪರ್ ಹಾಯಿಸಿ ಕೊಲೆ ಮಾಡಿ ನಂತರ ತಲೆ ಮರೆಸಿಕೊಂಡಿದ್ದ


ಪಯಾಝ್ ಅವರು ಶುಕ್ರವಾರ ಕೋಟೆಬಾಗಿಲು ಮಸೀದಿಗೆ ನಮಾಝ್ ಗೆ ತೆರಳುವ  ಸಂಧರ್ಭ  ಎಂಬಾತ ಅತೀ ವೇಗದಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ್ದು ಆಗ ಅಲ್ಲೇ  ನಡೆದುಕೊಂಡು ಹೋಗುತ್ತಿದ್ದ ಫಯಾಝ್ ಅವರ ಮೇಲೆ ಧೂಳನ್ನು ಹಾರಿಸಿದ್ದಾನೆ . ಆಗ ಕೋಪಗೊಂಡ ಫಯಾಝ್ ಅವರು ನಿಧಾನ ಹೋಗುವಂತೆ ಹೇಳಿದ್ದು ಈ ಸಂದರ್ಭ ಇಬ್ಬರ ಮದ್ಯೆ ಮಾತಿನ ಚಕಾಮಕಿ ನಡೆದಿದೆ.

  ನಮಾಝ್ ಮುಗಿಸಿಕೊಂಡು ಹಿಂತಿರುವ ಸಂದರ್ಭದಲ್ಲಿಯೂ ಇವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದ್ದು ಈ ಸಂಧರ್ಭ ಫಯಾಝ್ ಅವರು ಟಿಪ್ಪರ್ ನ ಸ್ಟೆಫ್ ಮೇಲೆ ಹೋಗಿ ಮಾತನಾಡಿದ್ದು ಆಗ ಆರೀಸ್ ಯಾವುದೋ ಮಾರಾಕಾಸ್ತ್ರದಿಂದ ತಲೆ ಭಾಗಕ್ಕೆ ಹೊಡೆದು ಟಿಪ್ಪರನ್ನು ಸ್ಟಾರ್ಟ್ ಮಾಡಿ ಮುಂದಕ್ಕೆ ಚಲಾಯಿಸಿದ್ದು ಆಗ ಆಯತಪ್ಪಿ ಫಯಾಝ್ ಅವರು ರಸ್ತೆಗೆ ಬಿದ್ದಿದ್ದಾರೆ. ಬಿದ್ದ ಅವರ ಮೇಲೇಯೇ ಟಿಪ್ಪರನ್ನು ಹಾಯಿಸಿದ್ದಾನೆ. 

ರಾಡ್ ನ ಏಟು ಮತ್ತು ಟಿಪ್ಪರ್ ನ ಅಡಿಗೆ ಬಿದ್ದ ಫಯಾಝ್ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟದ್ದರು.

 

ತಲೆ ಮರೆಸಿಕೊಂಡಿದ್ದ ಟಿಪ್ಪರ್ ಚಾಲಕ ಆರೀಸ್ ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು.    

ಮೂರು ದಿನಗಳ ನಂತರ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗೆ ನ್ಯಾಯಾಲಯವು ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ

Post a Comment

0 Comments