ಮಾ.8ರಂದು ಹೊಸಂಗಡಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ

 ಮಾ.8ರಂದು ಹೊಸಂಗಡಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ



ಮೂಡುಬಿದಿರೆ:ನಾಲ್ಕೂವರೆ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮಾರೂರು-ಹೊಸಂಗಡಿ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನಕ್ಕೆ ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ಸ್ವಾಮೀಜಿ ಮಾರ್ಚ್ 8ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ  ನೆರವೇರಿಸಲಿದ್ದಾರೆ ಎಂದು

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಶ್ರೀಪತಿ ಭಟ್ ತಿಳಿಸಿದರು.



 ಮಂಗಳವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ  ಸುದ್ದಿಗೋಷ್ಠಿ ನಡೆಶಿ ಈ ಬಗ್ಗೆ ಮಾಹಿತಿ ನೀಡಿದರು.

 ಸುಮಾರು 1200 ವರ್ಷಗಳ ಇತಿಹಾಸವಿರುವ ಗೋಪಾಲಕೃಷ್ಣ ದೇವಸ್ಥಾನವನ್ನು ಜೀಣೋದ್ಧಾರಗೊಳಿಸಿ ದೇವರನ್ನು ಪುನರ್‌ಪ್ರತಿಷ್ಠಾಪಿಸಿ ಬ್ರಹ್ಮಕಲಶೋತ್ಸವ ನಡೆಸುವ ಬಗ್ಗೆ ಸಿದ್ಧತಾ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ದೇವಸ್ಥಾನದ ಗರ್ಭಗುಡಿ, ತೀರ್ಥಮಂಟಪ ಹಾಗೂ ಸುತ್ತುಪೌಳಿಯನ್ನು ಶಿಲಾಮಯವಾಗಿ ನಿರ್ಮಿಸಲಾಗುವುದು. ದೇವಳದ ಮಾಗಣೆಗೆ ಸೇರಿದ 9 ಗ್ರಾಮಗಳಲ್ಲಿ ಈಗಾಗಲೇ ಗ್ರಾಮ ಸಮಿತಿಯನ್ನು ರಚಿಸಲಾಗಿದೆ ಎಂದರು. 

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಶ್ರೀ ಕ್ಷೇತ್ರ ಕರಿಂಜೆ ಇಲ್ಲಿನ ಮುಕ್ತಾನಂದ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಮಾರೂರುಗುತ್ತು ಭೋಜ ಶೆಟ್ಟಿ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಸುಧೀರ್ ಹೆಗ್ಡೆ ಬೈಲೂರು, ತೋಡಾರು ದಿವಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸುದ್ಧಿಗೋಷ್ಠಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂಪತ್ ಕುಮಾರ್, ಹೊಸಂಗಡಿ ಅರಮನೆಯ ಸುಕುಮಾರ್ ಶೆಟ್ಟಿ, ಜೀಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಅಸ್ರಣ್ಣರು, ಜತೆ ಕಾರ್ಯದರ್ಶಿ ಸುಶಾಂತ್ ಕರ್ಕೇರಾ  ಉಪಸ್ಥಿತರಿದ್ದರು

Post a Comment

0 Comments

Advertisement