ಮಂಗಳೂರಿಗೆ ಬರಲಿದ್ದಾರೆ ಬಿಜೆಪಿ ಚಾಣಾಕ್ಯ:ಯಾವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಅಮಿತ್ ಶಾ.?
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಇದೀಗ ಮಂಗಳೂರಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ವರಿಷ್ಠ, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ರೋಡ್ ಶೋ ಹಾಗೂ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ, ಪಿಎಫ್‍ಐ ನಿಷೇಧ ಸಹಿತ ವಿವಿಧ ಘಟನೆಗಳ ನಂತರ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಆಗಮಿಸುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಮೂಡಿಸಿದೆ.
0 Comments