ಅಮಿತ್ ಶಾ ಸ್ವಾಗತಕ್ಕೆ ಮಂಗಳೂರು ಸಜ್ಜು:ಸಂಸದರ ನೇತೃತ್ವದಲ್ಲಿ ಭರದ ಸಿದ್ಧತೆ
ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವರು ಮತ್ತು ಭಾರತೀಯ ಜನತಾ ಪಾರ್ಟಿಯ ಸರ್ವೋಚ್ಚ ನಾಯಕರಾದ ಅಮಿತ್ ಶಾ ರವರು ಇದೇ ತಿಂಗಳ (ಫೆಬ್ರವರಿ) 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳನ್ನು ನಡೆಸುವ ಕುರಿತು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.
ಈ ಸಭೆಯಲ್ಲಿ ಶಾಸಕರಾದ ಶ್ರೀ ಸಂಜೀವ ಮಠಂದೂರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments