ಕರ್ನಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಕರ್ನಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ



ಮೂಡುಬಿದಿರೆ: ಕರ್ನಾಟಕ ಬ್ಯಾಂಕಿನ ಸಂಸ್ಥಾಪಕರ ದಿನವನ್ನು ಶ್ರೀ ಮಹಾವೀರ ಕಾಲೇಜಿನ ಕರ್ನಾಟಕ ಬ್ಯಾಂಕ್ ನಲ್ಲಿ ಶನಿವಾರ ಆಚರಿಸಲಾಯಿತು.

 ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬ್ಯಾಂಕ್ ಬೆಳೆದು ಬಂದ ಹಾದಿಯ ಬಗ್ಗೆ ತಿಳಿಸಿದರು.

 ಎಂಸಿಎಸ್ ಬ್ಯಾಂಕ್ ನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ, ಪಿಯು ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್, ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಜೆ.ಜೆ.ಪಿಂಟೋ, ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಉಪಸ್ಥಿತರಿದ್ದರು.

ಬ್ಯಾಂಕಿನ ಗ್ರಾಹಕರು ಮತ್ತು ಸಿಬಂಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 ಬ್ಯಾಂಕ್ ಮೆನೇಜರ್ ರಕ್ಷಿತ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Post a Comment

0 Comments